Sunday, October 1, 2023

Latest Posts

ಇನ್ನೂ ಆಯ್ಕೆಯಾಗದ ವಿರೋಧ ಪಕ್ಷ ನಾಯಕ: ಬಿಜೆಪಿ ನಾಗತಿಹಳ್ಳಿ ಚಂದ್ರಶೇಖರ್ ನೀಡಿದ್ರು ಸಲಹೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಕಾಂಗ್ರೆಸ್ (Congress) ಸರಕಾರ ಬಂದು ಬಿಜೆಪಿಯಿಂದ (BJP) ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಹೀಗಾಗಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ಬಿಜೆಪಿಗೆ ಸಲಹೆಯೊಂದನ್ನು ನೀಡಿದ್ದಾರೆ.

ವಿರೋಧ ಪಕ್ಷದ ನಾಯಕನ (Leader of the Opposition) ಸ್ಥಾನದ ಕುರಿತಂತೆ ನಾಗತಿಹಳ್ಳಿ ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದು, ‘ಬಿಜೆಪಿಗೆ ಒಂದು ವಿನಮ್ರ ಸಲಹೆ. ವಿಪಕ್ಷ ನಾಯಕನಿಲ್ಲದೆ ವಿಧಾನ ಸಭೆ ಅಪೂರ್ಣ ಎನಿಸುತ್ತಿದೆ. ನಿಮಗೆ ಆಯ್ಕೆ ತೀರಾ ಕಷ್ಟವಾದಲ್ಲಿ ಕಾಂಗ್ರೆಸ್ ನಲ್ಲೇ ಸೂಕ್ತರಾದ ಒಬ್ಬರನ್ನು ಹುಡುಕಿ ವಿಪಕ್ಷ ನಾಯಕನ ಹುದ್ದೆಯನ್ನು ಔಟ್ ಸೋರ್ಸ್ ಮಾಡಿ’ ಎಂದು ಸಲಹೆ ನೀಡಿದ್ದಾರೆ.

ನಾಗತಿಹಳ್ಳಿ ಅವರು ಈ ಸಲಹೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!