ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತಬ್ಯಾಂಕ್ ತಿರುಗಿ ಬೀಳುವ ಭಯಕ್ಕೆ ರಾಮಲಲಾ ಪ್ರಾಣಪ್ರತಿಷ್ಠೆಗೂ ಕೈ ನಾಯಕರು ಬಂದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಎಲ್ಲರಿಗೂ ನಾವು ಆಹ್ವಾನ ನೀಡಿದ್ದೆವು, ಆದರೆ ಪ್ರಾಣಪ್ರತಿಷ್ಠೆಗೆ ಯಾರೂ ಬರಲಿಲ್ಲ. ಬಂದರೆ ಮತ ಬ್ಯಾಂಕ್ ಉಲ್ಟಾ ಹೊಡೆಯುವ ಭಯ ಇತ್ತು ಎಂದಿದ್ದಾರೆ.
ದೇಶದಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋಗುತ್ತಿದ್ದರು. ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮೌನವಾಗಿ ಇರುತ್ತಿದ್ದರು. ಆಗ ಏನಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಲಿ ಎಂದರು.
ಈಗ ಕಾಶ್ಮೀರದಲ್ಲಿ ಒಂದು ಸಣ್ಣ ಕಲ್ಲು ಹೊಡೆಯೋದಕ್ಕೂ ಯಾರೂ ಮುಂದೆ ಬರುತ್ತಿಲ್ಲ, ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋದಾಗ ಮನಮೋಹನ್ ಸಿಂಗ್ ಮೌನವ್ರತ ಮಾಡಿದ್ದರು, ಆದರೆ ಪ್ರಧಾನಿ ಮೋದಿ ಪಾಕಿಸ್ತಾನದ ಒಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿಸಿದರು. ಇದು ನಮಗೂ ಅವರಿಗೂ ಇರುವ ವ್ಯತ್ಯಾಸ ಎಂದರು.
ಉತ್ತಮ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಸರ್ಕಾರ ರಚಿಸುವ ಸಂಬಂಧ ಕೇಂದ್ರ ಮುಖ್ಯ