Wednesday, September 28, 2022

Latest Posts

ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಅಲೆಮಾರಿ ಸಮುದಾಯಗಳ ಮುಖಂಡರು ಪಕ್ಷಕ್ಕೆ ಸೇರ್ಪಡೆ

ಹೊಸದಿಗಂತ ವರದಿ, ಬೆಂಗಳೂರು:
ನಗರದ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲೆಮಾರಿ ಸಮುದಾಯದ ಅನೇಕ ಪ್ರಮುಖರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಎಸ್‍ಸಿ/ಎಸ್‍ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾದ ರಾಜ್ಯ ಅಧ್ಯಕ್ಷ ವೆಂಕಟರಮಣಯ್ಯ, ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ಕರ್ನಾಟಕ ರಾಜ್ಯ ಶಿಳ್ಳೇಕ್ಯಾತರ ಜನಾಂಗಾಭಿವೃದ್ಧಿ ವೇದಿಕೆ ರಾಜ್ಯ ಅಧ್ಯಕ್ಷ ಬಿ.ಎಚ್. ಮಂಜುನಾಥ್ ದಾಯತ್ಕರ್, ಅಲೆಮಾರಿ ಕಮ್ಮಾರ ಬುಡಕಟ್ಟು ಒಕ್ಕೂಟದ ರಾಜ್ಯ ಅಧ್ಯಕ್ಷ ಕೆ.ಪಿ. ಸಿದ್ದಾಪ್ಪಾಜಿ, ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ರಾಜ್ಯ ಉಪಾಧ್ಯಕ್ಷೆ ಭೀಮಪುತ್ರಿ ನಾಗಮ್ಮ ಮತ್ತು ಅಲೆಮಾರಿ ಸಮುದಾಯದ ಹಲವಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಗೊಂಡರು.
ಕೇಂದ್ರ ಮತ್ತು ರಾಜ್ಯ ಸರಕಾರಗಳು ತಳಸಮುದಾಯಗಳಿಗೆ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನ ಮಾಡುತ್ತಿದೆ. ಇದನ್ನು ತಮ್ಮ ಜನಾಂಗದವರಿಗೆ ತಿಳಿಸಬೇಕು ಮತ್ತು ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಶ್ರಮಿಸಬೇಕೆಂದು ನಳಿನ್‍ಕುಮಾರ್ ಕಟೀಲ್ ಈ ವೇಳೆ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!