Thursday, July 7, 2022

Latest Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹ: ಗೃಹ ಸಚಿವ ಬೊಮ್ಮಾಯಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಹುಬ್ಬಳ್ಳಿ:

ರಾಜ್ಯ ಬಿಜೆಪಿ ಸರಕಾರದ ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಾಗಿದೆ. ನಾನು ಇಂತಹ ಪಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಬಿ.ಎಸ್.ವೈ ರಾಜೀನಾಮೆ ವಿಷಯ ಬಂದಾಗಿನಿಂದ ಕಳೆದ ಒಂದು ವಾರದಿಂದ ನೂರಾರು ಸ್ವಾಮೀಜಿಗಳು ಭೇಟಿ ಆಗಿವುದು, ಮಾತನಾಡುವುದು ಮುಂದುವರೆದೇ ಇದೆ. ಇದರ ಭಾಗವಾಗಿ ಇಂದು ಮಠಾಧೀಶರು ಸಹ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ. ಆದರೆ ಈಗಾಗಲೇ ಹೈಕಮಾಂಡ ಏನು ಹೇಳುತ್ತದೆಯೋ ಅದನ್ನು ಪಾಲನೆ ಮಾಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ.
ಅವರು ಏನು ಹೇಳಿಕೆ ನೀಡಿದ್ದಾರೋ ಅದು ಬಹಳ ಮಹತ್ವವಾಗಿರುತ್ತದೆ ಎಂದರು.
ಪ್ರಲ್ಹಾದ್ ಜೋಶಿ ನಿವಾಸಕ್ಕೆ ನಿನ್ನೆ ರಾತ್ರಿ ಭೇಟಿ ನೀಡಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಸಚಿವ ಬೊಮ್ಮಾಯಿ, ನಮ್ಮ ಸದ್ಯದ ಆದ್ಯತೆ ಪ್ರವಾಹವಾಗಿದೆ. ಭಾರಿ ಮಳೆಯಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು, ನಾನು ಪ್ರವಾಹ ಸ್ಥಳಗಳಿಗೆ ಭೇಟಿ ನೀಡತ್ತಾ ಇದ್ದೇವೆ ಎಂದಷ್ಟೇ ಹೇಳಿ ಜಾರಿಕೊಂಡರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss