ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನಿ ಹ್ಯಾಂಡ್ಲರ್ ಗಳಿಗೆ ಭಾರತದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ಸೋರಿಕೆ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಆತನನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಮತಾಂಧನಾಗಿ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳು, ISI ಮತ್ತು ಆ ದೇಶದಲ್ಲಿ ಉಗ್ರಗಾಮಿ ಘಟಕ ನಡೆಸುತ್ತಿರುವ ಸಂಘಟನೆಗಳ ಜೊತೆಗೆ ಸಂಪರ್ಕದಲ್ಲಿದ್ದ ಬಾಲಕ, ದೇಶದ ಭದ್ರತೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ಎಂಬ ಮಾಹಿತಿ ಲಭಿಸಿತ್ತು.
ಇದನ್ನೂ ಓದಿ:KSRTC ಪ್ರಯಾಣಿಕರಿಗೆ ಸಿಹಿ ಸುದ್ದಿ: ಪ್ರೀಮಿಯಂ ಬಸ್ ದರ ಕಡಿತ
ಈ ಮಾಹಿತಿ ಆಧಾರದ ಮೇಲೆ ಸೋಮವಾರ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಯಿತು ಎಂದು ಪಠಾಣ್‌ಕೋಟ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ದಲ್ಜಿಂದರ್ ಸಿಂಗ್ ಧಿಲ್ಲೋನ್ ತಿಳಿಸಿದ್ದಾರೆ.
ಬಾಲಕನಿಗೆ ತಂದೆ ಇಲ್ಲ. ಒಂದು ವರ್ಷದ ಹಿಂದಿನಿಂದ ಆತ ಜಮ್ಮು ಕಾಶ್ಮೀರದಲ್ಲಿ ವಾಸಿಸುತ್ತಿದ್ದ ಅವರು ಕೊಲೆಯಾಗಿರುವ ಸಾಧ್ಯತೆಯಿದೆ. ಪೊಲೀಸ್ ತನಿಖೆಯಲ್ಲಿ ಬಾಲಕನ ತಂದೆ ಕೊಲೆ ತಿಳಿದುಬಂದಿಲ್ಲ.

