ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ 1ರಿಂದ 5ನೇ ತರಗತಿವರೆಗೆ ಪ್ರಾಥಮಿಕ ಶಾಲೆಗಳಲ್ಲಿ ಮರಾಠಿ ಹಾಗೂ ಇಂಗ್ಲಿಷ್ ಭಾಷೆಯ ಜತೆಯಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, ಇದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನಾ ಯುಬಿಟಿ ಬಣದ ನಾಯಕ ಉದ್ಧವ್ ಠಾಕ್ರೆ ಖಾರವವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ನಮಗೆ ಹಿಂದಿ ಭಾಷೆ ಮೇಲೆ ದ್ವೇಷವಿಲ್ಲ. ಆದರೆ, ಹಿಂದಿಯನ್ನು ಮಹಾರಾಷ್ಟ್ರದಲ್ಲಿನ ಜನಕ್ಕೆ ಏಕೆ ಹಿಂದಿ ಕಲಿಯಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ನನ್ನ ಪ್ರಕಾರ ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆಗೆ ಆಸ್ಪದವಿಲ್ಲ ಎಂದು ಗುಡುಗಿದ್ದಾರೆ.
ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ 25–26ನೇ ಸಾಲಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸಿದೆ. ಮೂರನೇ ಭಾಷೆಯಾಗಿ 1–5ನೇ ತರಗತಿವರೆಗೆ ಹಿಂದಿ ಭಾಷೆ ಕಲಿಕೆ ಕಡ್ಡಾಯ. 25–26ನೇ ಸಾಲಿನಿಂದ 1ರಿಂದ ತರಗತಿಗೆ ಅನ್ವಯವಾಗುವಂತೆ ಎನ್‌ಇಪಿ ಅನ್ನು ಜಾರಿಗೊಳಿಸಲಾಗಿದೆ ಎಂದು ಸರ್ಕಾರದ ಅದೇಶ ಹೊರಡಿಸಿತ್ತು.