24 ಗಂಟೆಯ ಒಳಗೆ ದೇಶ ಬಿಟ್ಟು ತೆರಳಿ: ಭಾರತದಿಂದ ಪಾಕಿಸ್ತಾನದ ಹೈಕಮಿಷನ್ ಅಧಿಕಾರಿಯ ಉಚ್ಛಾಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ಬುಧವಾರ (ಮೇ 21) ದೇಶದಿಂದ ಹೊರ ಹಾಕಲಾಗಿದೆ. ಆ ಅಧಿಕಾರಿಗೆ 24 ಗಂಟೆಯ ಒಳಗೆ ಭಾರತವನ್ನು ತೊರೆಯುವಂತೆ ಸೂಚಿಸಲಾಗಿದೆ.

ಭಾರತದಲ್ಲಿ ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಸರ್ಕಾರ ದೇಶದಿಂದ ಹೊರ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೇ 13ರಂದು ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ನೊಬ್ಬ ಅಧಿಕಾರಿಯನ್ನು ಹೊರ ಕಳುಹಿಸಲಾಗಿತ್ತು. ಈ ಮೂಲಕ 8 ದಿನಗಳ ಅಂತರದಲ್ಲಿ ಇಬ್ಬರು ಅಧಿಕಾರಿಗಳನ್ನು ಹೊರ ಹಾಕಿದಂತಾಗಿದೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿ ಮತ್ತು ನಂತರ ಉಂಟಾದ 2 ದೇಶಗಳ ನಡುವಿನ ಮಿಲಿಟರಿ ಘರ್ಷಣೆಯ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ. ‘ʼದಿಲ್ಲಿಯ ಪಾಕ್ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕ್ ಅಧಿಕಾರಿಯೊಬ್ಬರು, ಭಾರತದಲ್ಲಿ ಅವರ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಅವರನ್ನು ಅನುಚಿತ ವ್ಯಕ್ತಿ” ಎಂದು ಭಾರತ ಸರ್ಕಾರ ಘೋಷಿಸಿದೆ ಎಂಬುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿದೆ. ಅದಕ್ಕಾಗಿ 24 ಗಂಟೆಗಳ ಒಳಗೆ ಭಾರತ ಬಿಟ್ಟು ಹೋಗುವಂತೆ ಸೂಚಿಸಲಾಗಿದೆ ಎಂದು ಹೇಳಿದೆ.

ಆದಾಗ್ಯೂ, ಪಾಕ್ ಅಧಿಕಾರಿಯ ವಿರುದ್ಧ ಯಾವುದೇ ನಿರ್ದಿಷ್ಟ ಆರೋಪವನ್ನು ವಿದೇಶಾಂಗ ಸಚಿವಾಲಯ ಬಹಿರಂಗಪಡಿಸಿಲ್ಲ.

ಮೇ 11ರಂದು ದಿಲ್ಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಅಧಿಕಾರಿಯೊಂದಿಗೆ ಸಂಬಂಧ ಹೊಂದಿರುವ ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿರುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!