ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಡನ ಮನೆಯವರ ಕಿರುಕುಳ ಮತ್ತು ಮಾನಸಿಕ ಹಿಂಸೆ ತಾಳಲಾರದೆ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಬಳಿಯ ವಿಶ್ವೇಶ್ವರಯ್ಯ ಪಿಕ್‌ಅಪ್ ಡ್ಯಾಂ ಬಳಿ ನಡೆದಿದೆ.
ಮೃತ ಗೃಹಿಣಿ, ಉಪನ್ಯಾಸಕಿಯನ್ನು 28 ವರ್ಷದ ಪುಷ್ಪಾ ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಪುಷ್ಪಾ ಕಳೆದ ವರ್ಷ ವೇಣು ಎಂಬ ಯುವಕನೊಂದಿಗೆ ವಿವಾಹವಾಗಿದ್ದರು. ಮದುವೆಯ ನಂತರ, ಗಂಡನಮನೆಯವರಿಂದ ನಿರಂತರ ಮಾನಸಿಕ ಹಿಂಸೆ, ವರದಕ್ಷಿಣೆ ಕಿರುಕುಳದಿಂದ, ಬೇಸತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಒಂದು ಸುದೀರ್ಘ ವಿಡಿಯೋ ಚಿತ್ರೀಕರಿಸಿದ್ದು, ಅದರಲ್ಲೇ ತಾವು ಅನುಭವಿಸಿದ ನೋವು, ಗಂಡನ ಮನೆಯವರ ಕಿರುಕುಳ ಮತ್ತು ಬದುಕಿನ ನೊಂದ ಘಟನೆಗಳ ಬಗ್ಗೆ ವಿವರಿಸಿದ್ದಾರೆ.
ಈ ಘಟನೆಯ ಬಗ್ಗೆ ದೊಡ್ಡಬಳ್ಳಾಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಗಂಡ ವೇಣು, ಅತ್ತೆ ಮತ್ತು ಇತರ ಮನೆಯವರ ವಿರುದ್ಧ ಹಿಂಸೆ ಮತ್ತು ಪ್ರೇರಿತ ಆತ್ಮಹತ್ಯೆ ಆರೋಪಗಳಡಿ ತನಿಖೆ ಆರಂಭಿಸಿದ್ದಾರೆ.