ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ವಿಚಾರದಲ್ಲಿ ಇಡಿ ಎಂಬ ಸೀಳು ನಾಯಿಯನ್ನು ನಮ್ಮ ಮೇಲೆ ಬಿಟ್ಟಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. ಇಡಿ ಎಂಬುದು ಜಾರಿ ನಿರ್ದೇಶನಾಲಯ ಅಲ್ಲ, ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡೋಕೆ. ವಿರೋಧ ಪಕ್ಷದ ನಾಯಕರನ್ನು ಬಲಿಯಾಕಲಿಕ್ಕೆ ಅಷ್ಟೇ ಇಡಿಗೆ ಇರುವ ಉದ್ಯೋಗ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ ಉಪಚುನಾವಣೆಯಲ್ಲಿ 3 ಸ್ಥಾನ ಕಾಂಗ್ರೆಸ್ ಗೆದ್ದ ಮೇಲೆ, ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಅದಕ್ಕೆ ಇಡಿ ಎಂಬ ಸೀಳು ನಾಯಿಯನ್ನು ನಮ್ಮ ಮೇಲೆ ಬಿಟ್ಟಿದಾರೆ. ಇದು ಪೊಲಿಟಿಕಲ್ ಅಟ್ಯಾಕ್ ಇದೊಂದು ರಾಜಕೀಯ ಪಿತೂರಿ ಎಂದು ಕಿಡಿಕಾರಿದ್ದಾರೆ.