July 28, 2026
Tuesday, July 28, 2026
spot_img

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಕಾನೂನು ಕ್ರಮ: ಅಸ್ಸಾಂನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ನೀಡಿದ್ದು, ಹಿಮಂತ ಬಿಸ್ವಾ ಶರ್ಮಾ ಅವರನ್ನು ದೇಶದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಕರೆದಿದ್ದಾರೆ.

ಬಿಸ್ವಾನಾಥ್ ಮತ್ತು ಗೋಲಾಘಾಟ್ ಜಿಲ್ಲೆಯಲ್ಲಿ ಬೃಹತ್ ಸಾರ್ವಜನಿಕ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಮುಖ್ಯಮಂತ್ರಿ ಅಸಂಬದ್ಧ ರೀತಿಯಲ್ಲಿ ಮಾತನಾಡುತ್ತಾರೆ. ನಿರಂತರವಾಗಿ ರಾಜ್ಯವನ್ನು ವಿಭಜಿಸಲು ಮತ್ತು ದ್ವೇಷವನ್ನು ಹರಡಲು ಪ್ರಯತ್ನಿಸುತ್ತಾರೆ. ಆದರೆ ಇದೆಲ್ಲವೂ ಕೆಲವೇ ದಿನ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.

ಶರ್ಮಾ ಸರಕಾರ ಸಮುದಾಯಗಳ ನಡುವೆ ದ್ವೇಷವನ್ನು ಹರಡುತ್ತಿದೆ. ಆದರೆ ಇನ್ನೂ ಕೆಲವು ದಿನಗಳ.ಬಳಿಕ ಕಾಂಗ್ರೆಸ್ ಅಸ್ಸಾಂನಲ್ಲಿ ಸರ್ಕಾರ ರಚಿಸುತ್ತದೆ. ಅವರು ಕ್ಷಮೆ ಕೇಳಿದರೂ ಬಿಡಲ್ಲ ಎಂದು ಟೀಕಿಸಿದರು.

ಜುಬೀನ್ ಗರ್ಗ್ ತಮ್ಮ ಇಡೀ ಜೀವನವನ್ನು ಅಸ್ಸಾಂಗೆ ಮುಡಿಪಾಗಿಟ್ಟಿದ್ದಾರೆ. ಅವರು ಯಾರೊಂದಿಗೂ ಅಸಭ್ಯವಾಗಿ ವರ್ತಿಸಿಲ್ಲ. ಆದರೆ ಕಾಂಗ್ರೆಸ್ ಚಿಂತನೆ ಜುಬೀನ್ ಗಾರ್ಗ್ ಅವರ ತತ್ವವನ್ನು ಹೋಲುತ್ತದೆ. ಹೀಗಾಗಿ 100 ದಿನಗಳಲ್ಲಿ, ಜುಬೀನ್ ಗರ್ಗ್ ಪ್ರಕರಣದ ಆರೋಪಿಗಳನ್ನು ಶಿಕ್ಷಿಸುತ್ತೇವೆ ಮತ್ತು ಕ್ರಮ ಕೈಗೊಳ್ಳಲಾಗುವುದು ಎಡನು ಭರವಸೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !