ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಸ್ಯಾಂಡಲ್ ವುಡ್ ನಲ್ಲಿ ಸುದ್ದಿಯಲ್ಲಿರುವ ವಂಚನೆ ಆರೋಪಗಳಿಗೆ ನಟ ಕಿಚ್ಚ ಸುದೀಪ್ ಕಾನೂನು ನೀಡಲು ಹೊರಟಿದ್ದಾರೆ.
ಬೆಂಗಳೂರಿನ ಕಾರ್ಪೊರೇಷನ್ ಹತ್ತಿರದ ಎಸಿಎಂಎಂ ನ್ಯಾಯಾಲಯಕ್ಕೆ ಆಗಮಿಸಿದ ಕಿಚ್ಚ , ನನ್ನ ವಿರುದ್ಧ ಯಾರೆಲ್ಲ ಆರೋಪ ಮಾಡಿದ್ದಾರೋ ಅವರಿಗೆ ಕಾನೂನು ಮೂಲಕ ಉತ್ತರ ಕೊಡಬೇಕಿದೆ. ಹಾಗಾಗಿ ಕೋರ್ಟಿಗೆ ಹಾಜರಾಗುತ್ತಿರುವುದಾಗಿ ತಿಳಿಸಿದ್ದಾರೆ.
‘ನಾನು ಕಷ್ಟಪಟ್ಟು ಹೆಸರು ಸಂಪಾದಿಸಿದ್ದೇನೆ. ಅದನ್ನು ಹಾಳು ಮಾಡಿಕೊಳ್ಳಲು ನಾನು ಸಿದ್ದನಿಲ್ಲ. ಜನರಿಗೆ ತಪ್ಪು ಸಂದೇಶ ಹೋಗಬಾರದು ಎನ್ನುವ ಕಾರಣಕ್ಕಾಗಿ ಕೋರ್ಟಿಗೆ ಬಂದಿರುವೆ. ಅಲ್ಲಿಯೇ ಅವರಿಗೆಲ್ಲ ಉತ್ತರ ನೀಡುತ್ತೇನೆ’ ಎಂದರು
ಸುದೀಪ್ ನಿರ್ಮಾಪಕ ಕುಮಾರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ (Defamation) ಹೂಡಿದ್ದಾರೆ. ಕೋರ್ಟ್ (Court) ಹಾಲ್ 13 ರಲ್ಲಿ ಸುದೀಪ್ ಹಾಜರಾಗಿದ್ದರು. ಮುಂದಿನ ವಿಚಾರಣೆಯನ್ನು 17.08.2023ಕ್ಕೆ ನಿಗದಿ ಮಾಡಿದೆ.
ಈ ಹಿಂದೆ ಕುಮಾರ್ (N. Kumar) ಅವರಿಗೆ ಸುದೀಪ್ ಲೀಗಲ್ ನೋಟಿಸ್ (Notice) ನೀಡಿದ್ದರು. ಹತ್ತು ದಿನಗಳ ಗಡುವು ಕೂಡ ನೀಡಿದ್ದರು. ಕುಮಾರ್ ಬಹಿರಂಗ ಕ್ಷಮೆ ಕೇಳದೇ ಇದ್ದರೆ, ಕ್ರಿಮಿನಲ್ ಡಿಪಾಮೇಷನ್ ಹಾಕುವುದಾಗಿಯೂ ನೋಟಿಸ್ ನಲ್ಲಿ ತಿಳಿಸಿದ್ದರು. ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೇ ಇರುವ ಕಾರಣಕ್ಕಾಗಿ ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ.