ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರೋದು ಯಾಕೆ? ಎನ್ನುವ ಹೇಳಿಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೊಡ್ಡ ಸಮಸ್ಯೆ ತಂದೊಡ್ಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪರೋಕ್ಷವಾಗಿ ಅವಹೇಳನ ಮಾಡಿದ್ದ ರಾಗಾ ದೋಷಿ ಎಂದು ಗುಜರಾತ್‌ನ ಸೂರತ್ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಮೋದಿ ಎಂಬ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಪಕ್ಷದ ವರಿಷ್ಠರೊಬ್ಬರು ರಾಹುಲ್ ಗಾಂಧಿ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ನ್ಯಾಯಾಲಯ ಎರಡೂ ಕಡೆ ವಾದವನ್ನು ಆಲಿಸಿ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಮಾನಿಸಿದ್ದು, ಎರಡು ವರ್ಷ ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡ ವಿಧಿಸಿದೆ. ರಾಹುಲ್ ಗಾಂಧಿ ಜಾಮೀನು ಪಡೆದು ಶಿಕ್ಷೆಯಿಂದ ಪಾರಾಗಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಭಾಷಣದಲ್ಲಿ ಮೋದಿ ಎಂಬ ಹೆಸರಿನವರೆಲ್ಲ ಕಳ್ಳರು ಎಂಬ ಹೇಳಿಕೆ ನೀಡಿದ್ದರು.