ಹೊಸದಿಗಂತ ವರದಿ ಕಾರವಾರ:
ವಿಧಾನ ಪರಿಷತ್ ಗೆ ಚುನಾವಣೆ ನಡೆದ ಎಲ್ಲ ನಾಲ್ಕು ಕ್ಷೇತ್ರಗಳಲ್ಲಿ ಹಾಗೂ ವಿಶೇಷವಾಗಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಎಸ್.ವಿ. ಸಂಕನೂರು ಅವರು ಗೆಲುವು ಸಾಧಿಸಿರುವುದಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹರ್ಷ ವ್ಯಕ್ತಪಡಿಸಿದ್ದಾರೆ ಹಾಗೂ ಈ ಪಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪದವೀಧರ ಮತದಾರರು ಎನ್ ಡಿ ಎ ಅಭ್ಯರ್ಥಿಯ ಮೇಲೆ ವಿಶ್ವಾಸವಿಟ್ಟು ಬೆಂಬಲಿಸಿರುವುದು ಸಂತಸ ತಂದಿದೆ. ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವುದು, ಅವರ ಹಿತಾಸಕ್ತಿಗಳನ್ನು ಕಾಪಾಡುವುದು ಹಾಗೂ ಅವರ ಧ್ವನಿಯಾಗಿ ಕೆಲಸ ಮಾಡುವುದಕ್ಕೆ ಸದಾ ಬದ್ಧವಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಹ್ಯಾಟ್ರಿಕ್ ಗೆಲುವು ಸಾಧಿಸಿದ ಎಸ್ ವಿ ಸಂಕನೂರ ಅವರಿಗೆ ಅಭಿನಂದನೆಗಳು. ಪದವೀಧರ ಮತದಾರರು, ಎಲ್ಲ ನಾಲ್ಕೂ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ರೂಪಾಲಿ ಎಸ್. ನಾಯ್ಕ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:
ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ ಎಲ್ಲರ ಶ್ರಮದಿಂದ ಈ ಯಶಸ್ಸು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿಯೂ ಪದವೀಧರರ ಆಶೋತ್ತರಗಳಿಗೆ ಸ್ಪಂದಿಸಿ, ಅವರ ಅಭಿವೃದ್ಧಿ ಮತ್ತು ಹಿತರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



