ವಿಧಾನಸಭೆ ಎರಡನೇ ದಿನದ ಅಧಿವೇಶನ ಆರಂಭ: ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಭಾರೀ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿದಿದೆ. ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಿದೆ.

ಒಟ್ಟಾರೆ ಮೂರು ದಿನ ಈ ಅಧಿವೇಶನ ನಡೆಯಲಿದೆ. ಹಿರಿಯ ಶಾಸಕರಾಗಿರುವ ಆರ್. ವಿ. ದೇಶಪಾಂಡೆ ಅವರಿಗೆ ಪೂರ್ಣಾವಧಿ ಸ್ಪೀಕರ್​ ಆಯ್ಕೆ ಆಗುವವರೆಗೆ ಹಂಗಾಮಿ ಸ್ಪೀಕರ್‌ ಆಗಿ ಜವಾಬ್ದಾರಿ ನೀಡಲಾಗಿದೆ. ನೂತನ ಶಾಸಕರಿಗೆ ಇವರು ಪ್ರಮಾಣ ವಚನ ಬೋಧಿಸುತ್ತಿದ್ದಾರೆ.

ಇಂದು ಬಾಕಿ ಇರುವ ಶಾಸಕರು ಪ್ರಮಾಣ ವಚನ ಸ್ವೀಕರಿಸಿಸುತ್ತಿದ್ದಾರೆ. ಮಂಗಳೂರು ಶಾಸಕ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ​ ಕಾಂಗ್ರೆಸ್​ ಆಯ್ಕೆ ಮಾಡಲಾಗಿದೆ. ಇಂದು ಅವರು ನಾಮಪತ್ರ ಸಲ್ಲಿಸಿದ್ದಾರೆ.

ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!