ಹೊಸದಿಗಂತ ವರದಿ, ಕಲಬುರಗಿ:
ಕಲಬುರಗಿ-ಯಾದಗಿರಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಾನಂದ ಪಾಟೀಲ್ ಮರತೂರು ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿ,ಬಿಜೆಪಿ ಪಕ್ಷದವರು ಹಣದ ಬಲದ ಮೇಲೆ ಚುನಾವಣೆ ನಡೆಸುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಅಭ್ಯರ್ಥಿಯಾದ ಬಿ.ಜಿ.ಪಾಟೀಲ್ ಅವರು ತಮ್ಮ ಅವಧಿಯಲ್ಲಿ ಯಾವ ಕೆಲಸ ಕೂಡ ಮಾಡಿಲ್ಲ.ಅದರಂತೆ ಯಾವ ಸಭೆಯಲ್ಲಿಯೂ ಸಹ ಭಾಗಿಯಾಗಿಲ್ಲ ಎಂದ, ಕಾಂಗ್ರೆಸ್ ಪಕ್ಷದ ವರಿಷ್ಟರು ನನ್ನ ಮೇಲೆ ವಿಶ್ವಾಸವಿಟ್ಟು, ಸಾಮಾನ್ಯ ಕಾಯ೯ಕತ೯ನಿಗೆ ಟಿಕೆಟ್ ನೀಡಿದೆ.ಹೀಗಾಗಿ ನಿಮ್ಮೆಲ್ಲರ ಆಶೀರ್ವಾದ ನನಗೆ ಇರಲಿ ಎಂದು ಮನವಿ ಮಾಡಿದರು.
ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಶಿವಾನಂದ ಪಾಟೀಲ್ ಮರತೂರ ಒಬ್ಬ ಬಡ ಕುಟುಂಬದ ಸದಸ್ಯ, ಕಾಂಗ್ರೆಸ್ ಪಕ್ಷ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ ನೀಡಿದೆ. ತಾವೇಲ್ಲರೂ ನಮ್ಮ ಪಕ್ಷದ ಅಭ್ಯರ್ಥಿ ಗೆ ಗೆಲ್ಲಿಸಿ ತರಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಶಾಸಕ ಅಜಯ್ ಸಿಂಗ್,ಎಂ.ವೈ.ಪಾಟೀಲ್. ಖನೀಜ ಫಾತೀಮಾ, ಅಧ್ಯಕ್ಷ ಜಗದೇವ ಗುತ್ತೇದಾರ, ಅಲ್ಲಂಪ್ರಭು ಪಾಟೀಲ್, ತಿಪ್ಪಣಪ್ಪಾ ಕಮಕನೂರ,ನೀಲಕಂಠರಾವ ಮೂಲಗೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಆನೇಕ ಮುಖಂಡರು ಇದ್ದರು.