June 18, 2026
Thursday, June 18, 2026
spot_img

ವಿಧಾನ ಪರಿಷತ್ ಚುನಾವಣೆ: ವಂಡರ್‌ಲಾ ರೆಸಾರ್ಟ್‌ನಿಂದ ವಿಧಾನಸೌಧಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್ ಶಾಸಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ಮಹತ್ವದ ಮತದಾನ ನಡೆಯುತ್ತಿದ್ದು, ಅಡ್ಡ ಮತದಾನದ ಭೀತಿಯಿಂದ ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಶಾಸಕರನ್ನು ಕರೆತರಲು 5 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಮೊದಲ ತಂಡ ಈಗಾಗಲೇ ವಿಧಾನಸೌಧ ತಲುಪಿದೆ. ಜೆಡಿಎಸ್ ಶಾಸಕರು ಕೂಡ ರೆಸಾರ್ಟ್‌ನಿಂದ ನೇರವಾಗಿ ಮತದಾನ ಕೇಂದ್ರಕ್ಕೆ ಬರಲಿದ್ದಾರೆ.

ಸಂಖ್ಯಾಬಲದ ಲೆಕ್ಕಾಚಾರ

ಕಾಂಗ್ರೆಸ್‌ನಿಂದ ಐದು ಅಭ್ಯರ್ಥಿಗಳು ಕಣದಲ್ಲಿದ್ದು, ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಬಿಜೆಪಿಯಿಂದ ಉಚ್ಚಾಟಿತಗೊಂಡಿರುವ ಎಸ್‌ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಸೇರಿದಂತೆ ಒಟ್ಟು 140 ಶಾಸಕರು ಕಾಂಗ್ರೆಸ್ ಪರವಾಗಿದ್ದಾರೆ.

ಮತದಾನದ ಸಮಯ ಮತ್ತು ಪ್ರಕ್ರಿಯೆ

ವಿಧಾನಸಭೆಯ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಆಯೋಜನೆಗೊಂಡಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವೋಟಿಂಗ್ ನಡೆಯಲಿದ್ದು, ಸಂಜೆ 5 ಗಂಟೆಯ ನಂತರ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಯಾವುದೇ ಅಕ್ರಮ ಅಥವಾ ಗೊಂದಲಕ್ಕೆ ಆಸ್ಪದ ನೀಡದಂತೆ ಪ್ರತಿ ಅಭ್ಯರ್ಥಿಗೆ ಒಬ್ಬರಂತೆ ಏಜೆಂಟ್‌ಗಳನ್ನು ನೇಮಕ ಮಾಡಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !