ಹೊಸದಿಗಂತ ವರದಿ ಚಿತ್ರದುರ್ಗ
ಮಾಜಿ ಸಚಿವರು, ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯ 59ನೇ ಹುಟ್ಟು ಹಬ್ಬದ ಅಂಗವಾಗಿ ಸಿ.ಟಿ.ರವಿಯವರ ಅಭಿಮಾನಿಗಳ ಬಳಗದ ವತಿಯಿಂದ ಶನಿವಾರ ಚಿತ್ರದುರ್ಗ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ಒಳ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ಮಾಡಿ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಸಿ.ಟಿ.ರವಿಯವರ ಅಭಿಮಾನಿಗಳ ಬಳಗದ ಅಧ್ಯಕ್ಷ ರಘು ಕೆ.ಸಿ. ಚಿಕ್ಕಗೊಂಡನಹಳ್ಳಿ, ಶಿರಾ ವಿರೇಶ್, ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ಬಿಜೆಪಿ ಮುಖಂಡರಾದ ಆದರ್ಶ, ಚಳ್ಳಕೆರೆ ಮಂಡಲ ಪ್ರಧಾನ ಕಾರ್ಯದರ್ಶಿ ಓಬಳೇಶ್, ಕರಿಬಸವಣ್ಣ ಜೆ.ಎನ್. ಕೋಟೆ, ರೈತ ಮುಖಂಡರಾದ ಮಹಾಂತೇಶ್ ಗೌಡ, ಚಿಕ್ಕಗೊಂಡನಹಳ್ಳಿ, ಕೃಷ್ಟಾರೆಡ್ಡಿ ಎಂ.ಟಿ., ಸಂತೋಷ ಸೇರಿದಂತೆ ಇತರರು ಭಾಗವಹಿಸಿದ್ದರು.
ಇದಕ್ಕೂ ಮುನ್ನಾ ನಗರದ ಶ್ರೀ ನೀಲಕಂಠೇಶ್ವರ ದೇವಾಲಯದಲ್ಲಿ ನೀಲಕಂಠ ಸ್ವಾಮಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.



