ತೆಲಂಗಾಣದಲ್ಲಿ ಇಂದು ಶಾಸಕಾಂಗ ಪಕ್ಷದ ಸಭೆ, ನೂತನ ನಾಯಕನ ಆಯ್ಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ. ಇಂದು ಕಾಂಗ್ರೆಸ್ ಶಾಸಕರು ಸಭೆ ಮಾಡಲಿದ್ದು, ತಮ್ಮ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಹಿರಿಯ ನಾಯಕರು, ಶಾಸಕರು ಹಾಗೂ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ಸಭೆ ನಡೆಯಲಿದ್ದು, ಇಂದು ನಾಯಕನ ಆಯ್ಕೆ ಬಹುತೇಕ ಖಚಿತವಾಗಿದೆ.

119 ಸ್ಥಾನಗಳ ವಿಧಾನಸಭೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ನಾಯಕರ ನಿಯೋಗ ಈಗಾಗಲೇ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರ್‌ರಾಜನ್ ಅವರನ್ನು ಭೇಟಿ ಮಾಡಿದೆ. ರಾಜ್ಯದಲ್ಲಿ ಸರ್ಕಾರ ರಚಿಸುವ ಹಕ್ಕು ಮಂಡನೆ ಮಾಡಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿದ್ದ ಪಿಸಿಸಿ ಅಧ್ಯಕ್ಷ ಅನುಮುಲ ರೇವಂತ್ ರೆಡ್ಡಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!