ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಹನೂರು ತಾಲ್ಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನೊಬ್ಬನ ಮೇಲೆ ಬುಧವಾರ ಬೆಳಗ್ಗೆ ಚಿರತೆಯೊಂದು ದಾಳಿ ದಾಳಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನನ್ನು ಮಂಡ್ಯ ಜಿಲ್ಲೆಯ ಸುಮಾರು 30 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ ತಿಳಿಸಿದ್ದಾರೆ.
ತನ್ನ ಗ್ರಾಮದವರ ಜೊತೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಬಂದಿದ್ದ ಪ್ರವೀಣ್, ತಾಳುಬೆಟ್ಟದಿಂದ ಮಲೆ ಮಹದೇಶ್ವರನ ಬೆಟ್ಟದವರೆಗೆ ಕಾಲ್ನಡಿಗೆಯಲ್ಲಿ ತೆರಳುವಾಗ ಇದ್ದಕ್ಕಿದ್ದಂತೆ ಚಿರತೆ ದಾಳಿ ನಡೆಸಿದೆ. ಈ ವೇಳೆ ಕುತ್ತಿಗೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದರಿಂದ, ತೀವ್ರ ರಕ್ತಸ್ರಾವವಾಗಿ ಪ್ರವೀಣ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿರತೆ ದಾಳಿ ನಡೆಸಿದ ಕೂಡಲೇ ಪ್ರವೀಣ್ ಅವರ ಜೊತೆಗಿದ್ದ ಇತರರು ಸ್ಥಳದಿಂದ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.


