ರಸ್ತೆಗೆ ಬಂದ ಚಿರತೆ: ಸಿಕ್ಕ ಸಿಕ್ಕವರ ಮೇಲೆ ದಾಳಿ‌, ಭಯಾನಕ ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೈಸೂರಿನಲ್ಲಿ ಚಿರತೆಯೊಂದು ರಸ್ತೆಗೆ ಬಂದು ಭಯಾನಕ ವಾತಾವರಣವನ್ನು ಸೃಷ್ಟಿ ಮಾಡಿದೆ. ಬಡಾವಣೆಗಳಿಗೆ ನುಗ್ಗಿದ ಚಿರತೆಯೊಂದು ಜನರ ಮೇಲೆ ದಾಳಿ ನಡೆಸಿದೆ. ಚಿರತೆ ದಾಳಿಯಿಂದ ಹಲವರಿಗೆ ಗಂಭೀರ ಗಾಯಗಳಾಗಿವೆ. ಚಿರತೆ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ದಾಳಿ ಮಾಡುತ್ತಿರುವುದು ವಿಡಿಯೋದಲ್ಲಿದೆ. ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ಫೀಲ್ಡಿಗಿಳಿದು ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಚಿರತೆ ಸೆರೆ ಸಿಕ್ಕ ಬಳಿಕ ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!