ಕೊನೆಗೂ ಸೆರೆಯಾದ ಚಿರತೆ: ನಿರಾಳಗೊಂಡ ಗ್ರಾಮಸ್ಥರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಒಂದು ವಾರದಿಂದ ಅರಣ್ಯಾಧಿಕಾರಿಗಳಿಗೆ ತಲೆ ನೋವಾಗಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದು, ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುಂತೂರು ಬೆಟ್ಟದಲ್ಲಿ ಸ್ಪೆಷಲ್ ಲೆಪರ್ಡ್ ಟಾಸ್ಕ್ ಫೋರ್ಸ್ ನೇತೃತ್ವದಲ್ಲಿ ಕೂಂಬಿಂಗ್​ ಮೂಲಕ ಚಿರತೆ ಸೆರೆ ಹಿಡಿಯಲಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇತ್ತೀಚೆಗೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಬಳಿ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ್ದು, ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದಲ್ಲಿ ಚಿರತೆ ದಾಳಿ ಹಿನ್ನಲೆ ಮಕ್ಕಳು ಶಾಲೆಗೆ ಹೋಗಲು ಭಯ ಪಡುವಂತ ವಾತಾವರಣ ಸೃಷ್ಠಿಯಾಗಿತ್ತು. ಮೈಸೂರಿನಿಂದ ಆಗಮಿಸಿದ್ದ ಟಾಸ್ಕ್​ಫೋರ್ಸ್​ ಮಲ್ಲಿಗೆಹಳ್ಳಿ ಸುತ್ತಮುತ್ತ 60 ಸಿಸಿಕ್ಯಾಮರಾ, 2 ದೊಡ್ಡ ಬೋನ್​ ಸೇರಿದಂತೆ 9 ಬೋನ್​ಗಳನ್ನು ಸಿಬ್ಬಂದಿ ಅಳವಡಿಸಿದ್ದರು.

ಅರಣ್ಯ ಇಲಾಖೆಯ 70ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕೂಂಬಿಂಗ್​ ಕಾರ್ಯಚರಣೆ ಮಾಡಲಾಗಿತ್ತು. ಸದ್ಯ ಚಿರತೆ ಬೋನಿಗೆ ಬಿದ್ದಿದ್ದರಿಂದ ಗ್ರಾಮಸ್ಥರು ಸಂತಸಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!