ಹೊಸದಿಗಂತ ವರದಿ,ವಿಜಯಪುರ:
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮಣಂಕಲಗಿ ಗ್ರಾಮದಲ್ಲಿ ಶುಕ್ರವಾರ ಚಿರತೆ ಪ್ರತ್ಯಕ್ಷವಾಗಿದ್ದು, ಅರಣ್ಯ ಅಧಿಕಾರಿಗಳು ಬಲೆ ಹಾಕಿ ಸೆರೆ ಹಿಡಿದಿದ್ದಾರೆ.
ಇಲ್ಲಿನ ಗ್ರಾಮದ ಜೋಳದ ಹೊಲದಲ್ಲಿ ಕೆಲಸ ಮಾಡುತ್ತಿರುವ 4 ಜನ ರೈತರ ಮೇಲೆ ಚಿರತೆ ದಾಳಿ ಮಾಡಿ, ಗಾಬರಿ ಮೂಡಿಸಿತ್ತು.
ಗಾಯಾಳುಗಳನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಾಯದಿಂದ ಬಲೆ ಹಾಕಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ.
ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರು ಚಿರತೆ ಹಾವಳಿಯಿಂದ ಭೀತಿಗೊಂಡಿದ್ದರು.
ಸದ್ಯ ಚಿರತೆ ಸೆರೆ ಸಿಕ್ಕ ಹಿನ್ನೆಲೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.