ಹೊಸ ದಿಗಂತ ವರದಿ, ತುಮಕೂರು:
ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಮದ್ಲೇಹಳ್ಳಿ ಗ್ರಾಮದಲ್ಲಿ ಮಂಗಳವಾರ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ 4 ವರ್ಷದ ಚಿರತೆಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯನ್ನು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ.
ಚಿರತೆಯ ಅಸಹಜ ಸಾವಿನ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯಿಂದ ಸ್ಥಳ ತನಿಖೆ ನಡೆಸಿ, ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.