ಚಿತ್ರದುರ್ಗ : ಅಪರಿಚಿತ ವಾಹನ ಹರಿದು ಚಿರತೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತ ಪಟ್ಟಿರುವ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ದೊಡ್ಡಸಿದ್ದವ್ವನ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ ತಡರಾತ್ರಿ ಘಟನೆ ನಡೆದಿದ್ದು, ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಚಿರತೆಗೆ ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಚಿತ್ರದುರ್ಗ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!