ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬೊಮ್ಮನಹಳ್ಳಿ ಸಮೀಪದ ಕೂಡ್ಲುಗೇಟ್‌ನಲ್ಲಿ ಕಾಣಿಸಿಕೊಂಡ ಚಿರತೆಯನ್ನು ಅರಣ್ಯಾಧಿಕಾರಿಗಳು ಸತತ ಮೂರು ದಿನ ಕಾರ್ಯಾಚರಣೆ ನಡೆಸಿದ ಸೆರೆ ಹಿಡಿದಿದ್ದರು. ಆದರೆ, ಇದೀಗ ಚಿರತೆಯನ್ನು ಸೆರೆ ಹಿಡಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ.
ಬೆಂಗಳೂರಿನ ಜನರನ್ನು ಕಳೆದ ಮೂರು ದಿನಗಳಿಂದ ನಿದ್ದೆಗೆಡಿಸಿದ ಚಿರತೆಯು ಬುಧವಾರ ಮಧ್ಯಾಹ್ನದ ವೇಳೆಗೆ ಸೆರೆ ಸಿಕ್ಕಿತ್ತು ಎಂದು ಬೊಮ್ಮನಹಳ್ಳಿ ಬಳಿಯ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ, ಚಿರತೆಗೆ ಅರವಳಿಕೆ ಚುಚ್ಚು ಮದ್ದನ್ನು ನೀಡಿದ್ದರೂ, ಅದು ತಪ್ಪಿಸಿಕೊಂಡು ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಅದಕ್ಕೆ ಗುಂಡೇಟು ಹೊಡೆಯಲಾಗಿತ್ತು ಎಂದು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿದ ತಕ್ಷಣವೇ ವೇಗವಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಚಿರತೆ ಸಾವನ್ನಪ್ಪಿದೆ ಎಂದು ಹೇಳಲಾಗುತ್ತಿದೆ.