ಹೊಸದಿಗಂತ ಡಿಜಿಟಲ್ ಡೆಸ್ಕ್:
ಮರವೊಂದರ ಕಬ್ಬಿಣದ ತಂತಿಗೆ ಸಿಲುಕಿ ಜೀವನ್ಮರಣ ಹೋರಾಟ ಮಾಡುತ್ತಿದ್ದ ಚಿರತೆಯನ್ನು ರಕ್ಷಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ನಾಸಿಕ್ ಸಮೀಪದ ಅರಣ್ಯ ಗ್ರಾಮವೊಂದರಲ್ಲಿ ಚಿರತೆ ಮರಕ್ಕೆ ಹಾಕಿದ್ದ ಕಬ್ಬಿಣದ ತಂತಿಗೆ ಒದ್ದಾಡುತ್ತಿರುವುದನ್ನು ಕಂಡ ಸ್ಥಳೀಯರು ಪ್ರಾಣಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ.
ರಕ್ಷಣಾ ತಂಡ ಬಂದು ಚಿರತೆಗೆ ಅರವಳಿಕೆ ಮದ್ದು ನೀಡಿ, ತಂತಿ ಕತ್ತರಿಸಿ ಬಚಾವ್ ಮಾಡಿದ್ದಾರೆ. ಬಳಿಕ ಚಿರತೆಯ ಪಂಜದ ಮೇಲಿದ್ದ ಗಾಯಕ್ಕೆ ಬ್ಯಾಂಡೇಜ್ ಹಾಕಿ ಚಿಕಿತ್ಸೆ ನೀಡಲಾಯಿತು. ಗಾಯದಿಂದ ಚೇತರಿಸಿಕೊಂಡ ನಂತರ ಚಿರತೆಯನ್ನು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಚಿರತೆಯನ್ನು ರಕ್ಷಿಸುವ ವಿಡಿಯೋವನ್ನು ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರದ ಸಂಸ್ಥಾಪಕಿ ನೇಹಾ ಪಂಚಮಿಯಾ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
https://twitter.com/i/status/1721527988217413819