October 7, 2026
Wednesday, October 7, 2026
spot_img

ರಾಮನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಚಿರತೆಮರಿಗೆ ವಾಹನ ಡಿಕ್ಕಿ: ಸ್ಥಳದಲ್ಲಿಯೇ ಸಾ*ವು

ಹೊಸದಿಗಂತ ವರದಿ ರಾಮನಗರ :

ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಿರತೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಲೂರು ಹೋಬಳಿಯ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಸಮೀಪದ ಬೀರ್ವಾರ ಬಳಿ ನಡೆದಿದೆ.

4ರಿಂದ 5 ವರ್ಷದ ಗಂಡು ಚಿರತೆ ಮೃತಪಟ್ಟಿದೆ. ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ವಾಹನ ಡಿಕ್ಕಿ ಹೊಡೆದಿದೆ. ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಚಿರತೆ ನೋಡಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರಿದ್ದರು.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ವನ್ಯಜೀವಿಗಳು ರಸ್ತೆ ದಾಟುವ ಸಾಧ್ಯತೆ ಇದೆ. ವಾಹನ ಸವಾರರು ಜಾಗರೂಕತೆಯಿಂದ ಸಂಚರಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿ ನೇತ್ರಾವತಿ ಮನವಿ ಮಾಡಿದ್ದಾರೆ.

Must Read