Monday, December 22, 2025

ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ : ಸ್ಥಳದಲ್ಲೇ ಮೃತಪಟ್ಟ ಚಿರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ನಡೆದಿದೆ

ಮೂರು ವರ್ಷದ ಚಿರತೆ ಮರಿ ರಸ್ತೆ ದಾಟುತ್ತಿದ್ದ ವೇಳೆ ಹಿಟ್ ಆಂಡ್ ರನ್ ಮಾಡಿಕೊಂಡು ವಾಹನ ಸವಾರರು ಹೋಗಿದ್ದಾರೆ. ನಿಧಾನವಾಗಿ ಚಲಿಸಬೇಕಾಗಿದ್ದ ಅರಣ್ಯಪ್ರದೇಶದಲ್ಲಿ ಜೋರಾಗಿ ಹೋಗಿ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಮುಖಕ್ಕೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ.

ಘಟನೆಯ ಬಳಿಕ ಅಪರಿಚಿತ ವಾಹನದ ಪತ್ತೆಗಾಗಿ ಇಲಾಖೆ ಸಿಬ್ಬಂದಿ, ಪೊಲೀಸರು ಶೋಧ ಮಾಡುತ್ತಿದ್ದಾರೆ. ಸ್ಥಳಕ್ಕೆ ಶಿಗ್ಗಾಂವಿ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

error: Content is protected !!