ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಹೊರವಲಯದ ಕನಕಪುರ ರಸ್ತೆಯ ಮಲ್ಲಸಂದ್ರ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ. ನಾಲ್ಕೈದು ಕ್ಯಾಮೆರಾ ಅಳವಡಿಸಿ ಚಿರತೆ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ. ಶನಿವಾರ ಬೆಳಗ್ಗೆ 10 ಗಂಟೆಯಿಂದ ಕಾರ್ಯಾಚರಣೆ ಶುರು ಮಾಡಿದ್ದು, ಬಳಿಕ ರಾತ್ರಿಯಾದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.
ಈ ಪ್ರದೇಶದಲ್ಲಿ ಬೋನ್ ಅಳವಡಿಸಿದ ಅರಣ್ಯ ಸಿಬ್ಬಂದಿ ಇಂದು ಬೆಳಗ್ಗೆಯಿಂದಲೇ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.