ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು,ಹೀಗಾಗಿ ವಿದ್ಯಾರ್ಥಿಗಳು ಜಾಗರೂಕತೆಯಿಂದ ಇರುವಂತೆ ವಿವಿ ಸೂಚಿಸಿದೆ.
ಬೆಂಗಳೂರು ವಿವಿಯ ಕುಲಸಚಿವರು ಸುತ್ತೋಲೆ ಹೊರಡಿಸಿದ್ದು, ವಿವಿಯ ಆವರಣದಲ್ಲಿ ವನ್ಯಜೀವಿಯಾದ ಚಿರತೆಯು ಕಾಣಿಸಿಕೊಂಡಿರೋ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾದ ನಂತ್ರ ತಿಳಿದು ಬಂದಿದೆ.ಈ ಹಿನ್ನಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು, ಅದರಲ್ಲೂ ವಿವಿಯ ವಿದ್ಯಾರ್ಥಿನಿಯಗಳಲ್ಲಿ ನೆಲೆಸಿರುವಂತವರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಜಾಗೃತರಾಗಿರಬೇಕೆಂದು ತಿಳಿಸಿದ್ದಾರೆ.
ರಾತ್ರಿ ವೇಳೆಯಲ್ಲಿ ಸಂಚರಿಸುವುದನ್ನು ನಿಯಂತ್ರಣಗೊಳಿಸುವಂತೆ ತಿಳಿಸಿರುವ ವಿವಿಯೂ, ಆವರಣದಲ್ಲಿ ಎಲ್ಲಾದರೂ ಚಿರತೆಯ ಸಂಚಾರ ಕಂಡು ಬಂದಲ್ಲಿ ತಕ್ಷಣವೇ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!