ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಾರ್ಮಿಕರಲ್ಲಿ ಆತಂಕ ಮನೆಮಾಡಿದೆ.
ಕಾರ್ಮಿಕರು ಚಿರತೆಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ.
ಒಂದೆಡೆ ಮಳೆಯ ಅಬ್ಬರ, ಮತ್ತೊಂದೆಡೆ ಕಾರ್ಖಾನೆ ಬಳಿ ಚಿರತೆ ಪ್ರತ್ಯಕ್ಷವಾಗಿರುವುದು ಸುತ್ತ ಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಕಾರ್ಖಾನೆ ವತಿಯಿಂದ ಎಚ್ಚರಿಕೆ ಸಂದೇಶ ಪ್ರಕಟಿಸಲಾಗಿದೆ. ರಾತ್ರಿ ವೇಳೆಯಲ್ಲಿ ಕಾರ್ಮಿಕರು ಒಬ್ಬೊಬ್ಬರೇ ಓಡಾಡದಂತೆ ಸೂಚನೆ ನೀಡಲಾಗಿದೆ.