ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಚಿರತೆ ಓಡಾಟ: ವಾಹನ ಸವಾರರಿಗೆ ಅರಣ್ಯ ಇಲಾಖೆಯಿಂದ ಕಟ್ಟೆಚ್ಚರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಾಡಾನೆಗಳ ಹಾವಳಿಯಿಂದ ಸದಾ ಸುದ್ದಿಯಲ್ಲಿರುವ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ಕೊಂಡಿ ಚಾರ್ಮಾಡಿ ಘಾಟಿಯಲ್ಲಿ ಈಗ ಚಿರತೆ ಆತಂಕ ಶುರುವಾಗಿದೆ. ಘಾಟ ರಸ್ತೆಯಲ್ಲಿ ರಾತ್ರಿ ವೇಳೆ ಚಿರತೆಯೊಂದು ರಾಜಾರೋಷವಾಗಿ ಓಡಾಡುತ್ತಿರುವುದು ಕಂಡುಬಂದಿದ್ದು, ಪ್ರಯಾಣಿಕರು ಮತ್ತು ವಾಹನ ಸವಾರರಲ್ಲಿ ತೀವ್ರ ಭಯದ ವಾತಾವರಣ ನಿರ್ಮಿಸಿದೆ. ಘಾಟಿಯ 11ನೇ ತಿರುವಿನ ಬಳಿ, ಬೇಲೂರು 62 ಕಿ.ಮೀ. ಮೈಲಿಗಲ್ಲು ಸಮೀಪ ರಸ್ತೆ ಬದಿಯಲ್ಲಿ ಚಿರತೆ ಸಂಚರಿಸುತ್ತಿರುವ ದೃಶ್ಯವನ್ನು ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ … Continue reading ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಚಿರತೆ ಓಡಾಟ: ವಾಹನ ಸವಾರರಿಗೆ ಅರಣ್ಯ ಇಲಾಖೆಯಿಂದ ಕಟ್ಟೆಚ್ಚರ!