ಸಿಲಿಕಾನ್ ಸಿಟಿಯಲ್ಲಿ ಮತ್ತೆ ಚಿರತೆಗಳ ರೌಂಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆಗಳು ಕಾಣಿಸಿಕೊಳ್ಳತ್ತಿವೆ. ಜನರಲ್ಲಿ ಆತಂಕ ಮೂಡಿಸಿದೆ.

ನಗರದ ನಾಗರಬಾವಿ ಸುತ್ತಮುತ್ತ 2 ಮರಿ ಜತೆ ಚಿರತೆ ಒಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಬೈಕ್​ನಲ್ಲಿ ಹೋಗುವವರನ್ನು ಅಡ್ಡಗಟ್ಟುತ್ತಿದೆ ಎನ್ನಲಾಗುತ್ತಿದೆ. 5 ದಿನಗಳಿಂದ ನಾಗರಬಾವಿ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದೆ.

ಸದ್ಯ 2 ಮರಿ ಜತೆ ಚಿರತೆ ಓಡಾಡುತ್ತಿರುವ ದೃಶ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ರಾತ್ರಿ ವೇಳೆ ಮನೆಯಿಂದ ಹೊರಬರಲು ಜನರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲ ಕಡೆಗಳಲ್ಲಿ ಬೋನ್​ ಇಟ್ಟಿದ್ದು, ಆದರೆ ಇದುವರೆಗೆ ಚಾಲಾಕಿ ಚಿರತೆ ಬೋನ್​ ಮಾತ್ರ ಬಿದ್ದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!