ಅರವಿಂದ್ ಕೇಜ್ರಿವಾಲ್ ಪ್ರಧಾನಿ ಅಭ್ಯರ್ಥಿಯಾಗಲಿ: INDIA ಒಕ್ಕೂಟಕ್ಕೆ AAP ಡಿಮ್ಯಾಂಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಎಂದು ಎಎಪಿಯ (AAP) ಮುಖ್ಯ ವಕ್ತಾರ ಪ್ರಿಯಾಂಕಾ ಕಕ್ಕರ್ (Priyanka Kakkar) ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು,INDIA ಒಕ್ಕೂಟದ ಕೇಜ್ರಿವಾಲ್ ಅವರು ಜನರಿಗೆ ಅನುಕೂಲವಾಗುವ ಮಾದರಿಯನ್ನು ನೀಡಿದ್ದಾರೆ. ಅವರು ಪ್ರಧಾನಿ ಅಭ್ಯರ್ಥಿ ಆಗಬೇಕೆಂದು ನಾನು ಬಯಸುತ್ತೇನೆ. ಆದರೆ ನಿರ್ಧಾರ ನನ್ನ ಕೈಯಲ್ಲಿಲ್ಲ ಎಂದು ಹೇಳಿದ್ದಾರೆ.

ನಾಳೆಯಿಂದ ಮುಂಬೈ ಯಲ್ಲಿ ಎರಡು ದಿನಗಳ ಕಾಲ INDIA ಒಕ್ಕೂಟದ ಸಭೆ ನಡೆಯಲಿದ್ದು, ಈ ವೇಳೆ ಪದಾಧಿಕಾರಿಗಳ ನೇಮಕವಾಗುವ ಸಾಧ್ಯತೆ ಇದೆ. ಜೊತೆಗೆ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎನ್ನುವ ಚರ್ಚೆಯೂ ಶುರುವಾಗಿದ್ದು, ಈ ನಡುವೆ ಆಪ್ ನಾಯಕರು, ಅರವಿಂದ್ ಕೇಜ್ರಿವಾಲ್ ಇದಕ್ಕೆ ಅತ್ಯುತ್ತಮ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಎಎಪಿಯ ಮುಖ್ಯ ವಕ್ತಾರ ಪ್ರಿಯಾಂಕಾ ಕಕ್ಕರ್, ನಮ್ಮ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನು ಪ್ರಧಾನಿ ಅಭ್ಯರ್ಥಿ ಹುದ್ದೆಗೆ ಪ್ರಸ್ತಾಪಿಸುತ್ತೇನೆ. ಕೇಜ್ರಿವಾಲ್ ಯಾವಾಗಲೂ ಲಾಭ ಮತ್ತು ಜನಪರ ಬಜೆಟ್ ಅನ್ನು ಮಂಡಿಸಿದ್ದಾರೆ. ಭಾರತ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಗೆ ಅವರು ಸೂಕ್ತ ವ್ಯಕ್ತಿ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!