Saturday, June 10, 2023

Latest Posts

ಬೊಮ್ಮಾಯಿ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ, ನಾನು ಮೆಟ್ಟಿಲಾಗುತ್ತೇನೆ: ಸಚಿವ ವಿ. ಸೋಮಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ. ಸಾಧ್ಯವಾದರೆ ನಾನು ಮೆಟ್ಟಿಲಾಗುತ್ತೇನೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಇತ್ತೀಚೆಗಷ್ಟೇ ರಾಜ್ಯ ರಾಜಕಾರಣದಲ್ಲಿ ಭಾರೀ ಸುದ್ದಿಯಲ್ಲಿದ್ದ ವಸತಿ ಇಲಾಖೆ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹರಡಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ವಿ. ಸೋಮಣ್ಣ ಅವರು, ಇಷ್ಟು ವರ್ಷದಲ್ಲಿ ನನ್ನ ಬಹುದೊಡ್ಡ ಗೆಳೆಯ ಎಂದರೆ ಬಸವರಾಜ ಬೊಮ್ಮಾಯಿ.ನಾನು ಏಳೆಂಟು ಮುಖ್ಯಮಂತ್ರಿಗಳ ಜೊತೆಗೆ ಕೆಲಸ ಮಾಡಿದ್ದೇನೆ. ಬಸವರಾಜ ಬೊಮ್ಮಾಯಿ ತಂದೆ ಜೊತೆಗೂ ಕೆಲಸ ಮಾಡಿದ್ದೇನೆ. ಆದರೆ ಬೊಮ್ಮಾಯಿ ಅವರಷ್ಟು ಜನಪರ ಸಿಎಂ ನಾನು ನೋಡ ನೋಡೇ ಇಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!