ಹೊಸದಿಗಂತ ವರದಿ,ವಿಜಯಪುರ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಟ್ವಿಟ್ ಮಾಡಿರುವ ಅವರು, ಅಧಿಕಾರದ ದುರುಪಯೋಗ, ನಿಯಮಾವಳಿಗಳ ಉಲ್ಲಂಘನೆ, ಅರ್ಹ ನಿವೇಶನದಾರರ ಹಿತಾಸಕ್ತಿಯನ್ನು ಬಲಿಕೊಟ್ಟು, ತಮ್ಮ ಸ್ವಹಿತಾಸಕ್ತಿಗಳಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ, ಬದಲಿ ನಿವೇಶನಗಳನ್ನು ಮಂಜೂರು ಮಾಡಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನಿಖೆ ಎದುರಿಸಬೇಕು.
ಈ ಕೂಡಲೇ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಮೂಲಕ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದ್ದಾರೆ.