ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಿ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಒಬ್ಬರೇ ಇರ್ತಾರೆ ಅಂದಿದ್ರು. ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಚುನಾವಣಾ ಫಲಿತಾಂಶ ಬರಲಿ ಎಂದು ಆಶಿಸುತ್ತೇನೆ. ಈ ಸಂದರ್ಭದಲ್ಲಿ, ಧ್ರುವೀಕರಣ ಸಂಭವಿಸಬಹುದು. ಇದು ಇಲ್ಲಿ ಮಾತ್ರವಲ್ಲ ಎಲ್ಲಿ ಬೇಕಾದರೂ ಆಗಬಹುದು. ದಯವಿಟ್ಟು ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ.
ಅಧ್ಯಕ್ಷರು ಬದಲಾಗುವ ಪರಿಸ್ಥಿತಿ ನಮಗೆ ಬಂದರೆ, ನಾವು ಸಿದ್ಧರಿದ್ದೇವೆ. ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಪಕ್ಷ ನಡೆಸಲು ನನ್ನ ಕೈಲಾದ ಪ್ರಯತ್ನ ಮಾಡುತ್ತೇನೆ. ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.