ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಮಾರಸ್ವಾಮಿ ರಾಜಕಾರಣ, ಬೇರೆ ಮಾತು ಎಲ್ಲವನ್ನು ಬಿಟ್ಟು ರಾಜ್ಯದಲ್ಲಿ 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್ ಸರ್ಕಾರ ಅವರಿಗೆ ಬೇಕಾದಂತಹ ಸಹಕಾರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕುಮಾರಸ್ವಾಮಿಗೆ ಮೋದಿ ಅವರು ಉಕ್ಕು, ಕೈಗಾರಿಕೆ ಎನ್ನುವ ದೊಡ್ಡ ಹಾಗೂ ಉತ್ತಮ ಖಾತೆ ಕೊಟ್ಟಿದ್ದಾರೆ. ಅವರಿಗೆ ಸಿಕ್ಕಿರುವ ಒಳ್ಳೇ ಅವಕಾಶ ಬಳಸಿಕೊಳ್ಳಲಿ ಎಂದರು. ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು ಹೋಗಲಿ. ರಾಜಕೀಯ ಇದ್ದಿದ್ದೇ, ಏಕೆ ಇಂತಹ ಅವಕಾಶವನ್ನು ಕಳೆದುಕೊಳ್ಳುತ್ತಾ ಇದ್ದಾರೆ” ಎಂದು ಡಿಕೆಶಿ ವ್ಯಂಗ್ಯವಾಡಿದ್ದಾರೆ.
ನಾವೆಲ್ಲಾ ಪ್ರತಿದಿನ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ದಿಯಿದ್ದರೇ ತಾನೇ ರಾಜಕೀಯ.ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ.ಎತ್ತಿನಹೊಳೆ ಕೆಲಸ ಮುಗಿಸಬೇಕು, ಪ್ರಣಾಳಿಕೆಗಳಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಪ್ರತಿದಿನ ಸಮಯ ಓಡುತ್ತಿರುತ್ತದೆ ಎಂದು ಹೇಳಿದ್ದಾರೆ.