ಹೊಸದಿಗಂತ ವರದಿ ಬಾಗಲಕೋಟೆ :
ಎರಡು ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ ನಡೆಸಿ ಕಾನೂನು ಬಾಹಿರ ವಿದ್ಯುತ್ ಬಳಕೆ ಮಾಡಿಕೊಂಡು ದೀಪಾವಳಿ ಹಬ್ಬದಂದು ಮನೆಗೆ ಅಲಂಕಾರ ಮಾಡಿಕೊಂಡ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಸನ್ಯಾಸ ದೀಕ್ಷೆಯನ್ನು ಪಡೆದುಕೊಳ್ಳಲು ನಿರ್ಣಯ ಕೈಗೊಳ್ಳಬೇಕು ಎಂದು ಕೆಪಿಸಿಸಿ ರಾಜ್ಯ ಮುಖಂಡರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಸಲಹೆ ನೀಡಿದರು.
ನವನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ವಿದ್ಯುತ್ ಒಪ್ಪಿಗೆ ಇಲ್ಲದೇ ಪಡೆದುಕೊಂಡಿದ್ದಕ್ಕೆ 68 ಸಾವಿರ ರೂ. ದಂಡವನ್ನು ವಿಧಿಸಿದ್ದು ಒಬ್ಬ ಮುಖ್ಯಮಂತ್ರಿ ಅದವರು ದಂಡ ಕಟ್ಟುವಂತಹ ಸ್ಥಿತಿಗೆಬಂದಿದ್ದಾರೆ ಎಂದರೆ ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಬೇಕು ಎಂದರು.
ಕೇಂದ್ರ ಸರ್ಕಾರ ಸಾರ್ವಜನಿಕ ಉದ್ಯಮ ಖಾಸಗಿ ಅವರಿಗೆ ಕೊಡಲು ಹೋದರೆ ಸಾಮಾಜಿಕ ನ್ಯಾಯಕ್ಕೆ ಕೊಡಲಿ , ಕುಡಗೋಲು ಪೆಟ್ಟು ಬೀಳಲಿದೆ ಎಂದು ಹೇಳಿದರು.
ಜಿಲ್ಲಾ ವಕ್ತಾರ ಚಂದ್ರಶೇಖರ ರಾಠೋಡ , ಸಿಕಂದರ ಅಥಣಿ ಪತ್ರಿಕಾಗೋಷ್ಠಿ ಯಲ್ಲಿದ್ದರು.