ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲಾ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು.

ನಾಗಮಂಗಲದ ಕೋಮುಗಲಭೆ ಪ್ರಕರಣದಲ್ಲಿ ಮೊದಲು ಹಿಂದುಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!