ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಧರ್ಮದ ಆಧಾರ ಮೇಲೆ ತೆರಿಗೆ ಸಂಗ್ರಹದ ವರದಿ ಸಿದ್ದ ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಹಿಂದೂಗಳು ಎಷ್ಟು ತೆರಿಗೆ ಕಟ್ಟುತ್ತಿದ್ದಾರೆ? ಮುಸ್ಲಿಮರು, ಕ್ರಿಶ್ಚಿಯನ್ ರು ಎಷ್ಟು ತೆರಿಗೆ ಕಟ್ಟುತ್ತಿದ್ದಾರೆ ? ಅದರ ವರದಿ ತಯಾರಿಸಿ ಬಿಡುಗಡೆ ಮಾಡಿ. ರಾಜ್ಯ ಬಜೆಟ್ ಗೆ ಸಾಬರ ಕೊಡುಗೆ ಎಷ್ಟು ಎಂಬುದು ಜನರಿಗೆ ಗೊತ್ತಾಗಲಿ. ಮಸೀದಿಯಿಂದ, ಚರ್ಚ್ ನಿಂದ ಸರಕಾರಕ್ಕೆ ಐದು ರೂಪಾಯಿ ಆದರೂ ತೆರಿಗೆ ಬರುತ್ತಿದೆಯಾ? ಇದು ಹಲಾಲ್ ಬಜೆಟ್ ಅನ್ನೋದರಲ್ಲಿ ಯಾವುದೇ ತಪ್ಪಿಲ್ಲ ಎಂದರು.
ಒಕ್ಕಲಿಗರು, ಲಿಂಗಾಯತರು, ಬ್ರಾಹ್ಮಣ, ಮಡಿವಾಳರ ಹೀಗೆ ನಾನಾ ಜಾತಿಯ ಅಭಿವೃದ್ಧಿ ನಿಗಮಕ್ಕೆ ಎಷ್ಟು ಹಣ ಕೊಟ್ಟಿದ್ದಿರಾ? ಇವತ್ತು ಇಲ್ಲಿನ ಕೆಲ ಮುಸ್ಲಿಮರಿಗೆ ಪಾಕಿಸ್ತಾನ ನಿಷ್ಠೆ ಇದೆ. ರಾಜ್ಯದಲ್ಲಿ ಮದರಾಸ, ಉರ್ದು ಶಾಲೆ ಬಂದ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.