ಟ್ರಂಪ್ ಸುಳ್ಳುಗಾರ ಎಂದು ಪ್ರಧಾನಿ ಮೋದಿ ಹೇಳಲಿ: ಲೋಕಸಭೆಯಲ್ಲಿ ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ‘ಆಪರೇಷನ್ ಸಿಂದೂರ್’ ಕುರಿತು ಚರ್ಚೆಯ ವೇಳೆ ರಾಷ್ಟ್ರಿಯ ಭದ್ರತೆ ವಿಚಾರದಲ್ಲಿ ಗಂಭೀರ ಹಾಗೂ ದೀರ್ಘಕಾಲೀನ ನೀತಿ ಅಗತ್ಯವಿದೆ. ಪ್ರತಿಕ್ರಿಯಾತ್ಮಕ ಹಾಗೂ ರಾಜಕೀಯ ಪ್ರೇರಿತ ಕ್ರಮಗಳು ಅನುಕೂಲಕರವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳನ್ನು ರಾಷ್ಟ್ರೀಯ ಹಿತಾಸಕ್ತಿಗಾಗಿ ಮತ್ತು ಸಂಪೂರ್ಣ ಸ್ವಾತಂತ್ರ್ಯದೊಂದಿಗೆ ಬಳಸಬೇಕು. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಷ್ಠೆಯನ್ನು ರಕ್ಷಿಸಲು ಅಲ್ಲ, ಇದು ದೇಶಕ್ಕೆ ಅಪಾಯಕಾರಿ ಎಂದು ರಾಹುಲ್ ಗಾಂಧಿ ಹೇಳಿದರು.

ನನ್ನ ಮಧ್ಯಸ್ಥಿಕೆಯಿಂದಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 29 ಬಾರಿ ಹೇಳಿದ್ದಾರೆ. ಅವರು ಸುಳ್ಳು ಹೇಳುತ್ತಿದ್ದರೆ, ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಇದನ್ನು ಸ್ಪಷ್ಟಪಡಿಸಲಿ ಎಂದು ರಾಹುಲ್​ ಗಾಂಧಿ ಒತ್ತಾಯಿಸಿದರು.

ನೀವು ಸುಳ್ಳು ಹೇಳುತ್ತಿದ್ದೀರಿ. ಪ್ರಧಾನಿ ಮೋದಿಗೆ ಇಂದಿರಾ ಗಾಂಧಿಯವರಂತೆ ಧೈರ್ಯವಿದ್ದರೆ, ಅವರು ಇಲ್ಲಿ ನಿಂತು ಡೊನಾಲ್ಡ್ ಟ್ರಂಪ್, ನೀವು ಸುಳ್ಳುಗಾರ ಎಂದು ಹೇಳಲಿ ಎಂದು ಸವಾಲು ಹಾಕಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!