ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತೀಯ ಕ್ರಿಕೆಟ್ ತಂಡದಲ್ಲಿ ಶೇಕಡಾ 70 ರಷ್ಟು ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಹೀಗಾಗಿ ಕ್ರಿಕೆಟ್ ತಂಡದಲ್ಲೂ ಮೀಸಲಾತಿ ಜಾರಿಯಾಗಬೇಕು ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಮೀಸಲಾತಿ ಕೊಟ್ಟರೆ ಭಾರತದ ಕ್ರಿಕೆಟ್ ತಂಡ ಇನ್ನೂ ಉತ್ತಮವಾಗಲಿದೆ ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ಟೀಂನಲ್ಲಿ 2016 ರಿಂದ 6 ಮಂದಿ ಕರಿಯರಿಗೆ ಮೀಸಲಾತಿ ನೀಡಲಾಗುತ್ತಿದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ದಕ್ಷಿಣ ಆಫ್ರಿಕಾದ ಮಾದರಿಯಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲೂ ಮೀಸಲಾತಿ ನೀಡಬೇಕು. ಎಸ್ಸಿ ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತದೆ ಎಂದರು.