June 15, 2026
Monday, June 15, 2026
spot_img

ಆರ್‌ಎಸ್‌ಎಸ್ ನೋಂದಣಿ ಮಾಡಿಸಲಿ, ತೆರಿಗೆ ಪಾವತಿಸಲಿ: ಮೋಹನ್ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆಡಿದ್ದು, ಸಂಘದ ಕಾನೂನುಬದ್ಧ ಸ್ಥಾನಮಾನ, ಹಣಕಾಸಿನ ಮೂಲಗಳು ಮತ್ತು ತೆರಿಗೆ ಪಾವತಿ ಕುರಿತಂತೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ್ದಾರೆ.

ಆರ್‌ಎಸ್‌ಎಸ್ ಯಾವ ಕಾನೂನು ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ? ಅದರ ಅಧಿಕೃತ ಸಂಘಟನಾ ರಚನೆ ಏನು? ಸಾರ್ವಜನಿಕ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ಹೇಗೆ ಪಡೆಯಲಾಗುತ್ತದೆ? ಎಂಬ ವಿವರಗಳನ್ನು ಬಹಿರಂಗಪಡಿಸುವಂತೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಕರ್ನಾಟಕದಲ್ಲೇ ಸಂಘ ಸಾವಿರಾರು ಶಾಖೆಗಳು ಮತ್ತು ಲಕ್ಷಾಂತರ ಜನರನ್ನು ತಲುಪುವ ಕಾರ್ಯಕ್ರಮಗಳನ್ನು ಸಂಘ ನಡೆಸುತ್ತಿದೆ ಎಂದು ಉಲ್ಲೇಖಿಸಿ, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆಯೂ ಸಾರ್ವಜನಿಕ ಉತ್ತರದಾಯಿತ್ವದಿಂದ ಹೊರಗಿರಬಾರದು ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !