ಹೊಸದಿಗಂತ ಡಿಜಿಟಲ್ ಡೆಸ್ಕ್:
ವರುಣಾದಲ್ಲಿ ಸೋಲುತ್ತೇನೆ ಅನ್ನೋ ಭಯಕ್ಕೆ ಮತ್ತೊಂದು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಹೊರಟ್ಟಿದ್ದಾರೆ.
ಕೋಲಾರ ಸೇರಿದಂತೆ ಬೇರೆ ಬೇರೆ ಕಡೆ ಕ್ಷೇತ್ರ ಹುಡುಕುತ್ತಿದ್ದಾರೆ.
ಸಿದ್ದರಾಮಯ್ಯನವರು 224 ಕ್ಷೇತ್ರ ಸ್ಪರ್ಧೆ ಮಾಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಭ್ರಮನಿರಸಗೊಂಡಿದ್ದಾರೆ.
ಸಿದ್ದರಾಮಯ್ಯ ಇಡೀ ರಾಜ್ಯದಲ್ಲಿ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯನವರಿಗೆ ಇನ್ನೂ ಸಹ ಕ್ಷೇತ್ರ ಸಿಕ್ಕಿಲ್ಲ. ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಬಗ್ಗೆ ಅದ್ಯಾವುದು ತೀರ್ಮಾಣ ಆಗಿಲ್ಲ. ಆದ ಬಳಿಕ ಮಾತಾನಾಡುತ್ತೇನಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.