ಸಿದ್ದರಾಮಯ್ಯ ಕಾನೂನು ರೀತಿ ನಡೆದುಕೊಳ್ಳಲಿ: ಕೇಂದ್ರ ಸಚಿವ ವಿ.ಸೋಮಣ್ಣ

ಹೊಸ ದಿಗಂತ ವರದಿ,ತುಮಕೂರು:

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಕಾನೂನು ಅಡಿಯಲ್ಲಿ ತಮ್ಮ ಕೆಲಸ ಮಾಡಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ ಕಾನೂನು ಚೌಕಟ್ಟಿನಲ್ಲಿ ನಡೆದುಕೊಳ್ಳಬೇಕಿದೆ ಎಂದು ಪರೋಕ್ಷವಾಗಿ ರಾಜಿನಾಮೆ ನೀಡಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

ತುಮಕೂರಿನಲ್ಲಿ ಮಾತನಾಡಿದ ಅವರು, ಕಾನೂನು ಚೌಕಟ್ಟಿನಲ್ಲಿ ನಡೆದುಕೊಳ್ಳಬೇಕಿರುವುದು ಅನುಭವಿ ರಾಜಕಾರಣಿಯ ಕರ್ತವ್ಯ. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕು ಎನ್ನುವುದು ನನ್ನ ಆಗ್ರಹ. ಕಾನೂನು ಚೌಕಟ್ಟಿನಲ್ಲಿ ನಡೆದುಕೊಂಡರೆ ಅವರ ವರ್ಚಸ್ಸು ಹೆಚ್ಚಾಗುತ್ತದೆ ಎಂದು ತಿಳಿಸಿದರು.

ರಾಜ್ಯಪಾಲರಿಗೆ ಈ ಪ್ರಕರಣದಲ್ಲಿ ತಪ್ಪು ಎನಿಸಿದ್ದರಿಂದ ಅವರು ಪ್ರಾಸಿಕ್ಯೂಷನ್ ನಿರ್ಧಾರ ಮಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂಬ ಉದ್ದೇಶದಿಂದಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ನುರಿತ ರಾಜಕಾರಣಿ. ಇಂತಹ ಸಂದರ್ಭದಲ್ಲಿ ಅವರ ಪಕ್ಷ ದೃಢ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ರಾಜಿನಾಮೆ ಬಗ್ಗೆ ನಾವು ತೀರ್ಮಾನ ಮಾಡಲು ಆಗುವುದಿಲ್ಲ. ಅವರ ಪಕ್ಷ ತೀರ್ಮಾನ ಮಾಡಬೇಕು ಎಂದರು.

ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ 125 ವರ್ಷ ಇತಿಹಾಸ ಇರುವ ಪಕ್ಷ ನಾವು ಬಿಜೆಪಿಯವರು ಹೇಗೆ ನಡೆದುಕೊಂಡಿದ್ದೀವಿ ಎಂಬುದನ್ನು ಅರ್ಥ ಮಾಡಿಕೊಂಡು ತೀರ್ಮಾನ ಕೈಗೊಂಡರೆ ಮುಂದಿನ ಪೀಳಿಗೆಗೆ ರಾಜಕೀಯದ ಬಗ್ಗೆ ಗೌರವ ಬರುತ್ತದೆ ಎಂದರು.

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿದ್ದರೆ ಸಂತೋಷ ಪಡುತ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ. ನಾನು ಹೇಳಿದ್ದು ಅವರ ಪಕ್ಷ ನಿರ್ಧಾರ ಮಾಡಿ ಪರಮೇಶ್ವರ್‌ರವರನ್ನು ಮುಖ್ಯಮಂತ್ರಿ ಮಾಡಿದರೆ ನಾನು ಸಂತೋಷ ಪಡುತ್ತೀನಿ ಎಂದಷ್ಟೆ ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!