June 29, 2026
Monday, June 29, 2026
spot_img

2028ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇರಲಿ: ಕಲಬುರಗಿಯಲ್ಲಿ ಕುರುಬರ ಸಂಘದಿಂದ ಪ್ರತಿಭಟನೆ

ಹೊಸ ದಿಗಂತ ವರದಿ,ಕಲಬುರಗಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರವರೆಗೆ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಮುಂದುವರಿಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ, ಧರ್ಮರಾಜ ಹೆರೂರು, ನಾಗೇಶ್ ಮುಚ್ಛೇಡ್, ರೇವಣಸಿದ್ದಪ್ಪ ಸಾತನೂರು, ಲಕ್ಷ್ಮಣ ಪೂಜಾರಿ, ಅಮೋಘಸಿದ್ಧ, ಕುಪೇಂದ್ರ ಬರಗಾಲಿ, ಶಿವಲಿಂಗ ಬಾಸ್ಸಿ ಸಾವಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !