ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ಜನತಾ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಳಿವಾಡ, ಸಿದ್ದರಾಮಯ್ಯ ಅವರು ಎಷ್ಟೇ ತಪ್ಪು ಮಾಡಿಲ್ಲ ಎಂಬ ಹೇಳಿಕೆ ನೀಡಿದ್ದರೂ ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.