ದೆಹಲಿ ಪೊಲೀಸರಿಂದ ಎಲ್‌ಇಟಿ ಉಗ್ರನ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಉಗ್ರನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಉಗ್ರ ನಿವೃತ್ತ ಸೇನಾ ಸಿಬ್ಬಂದಿಯಾಗಿದ್ದು. ಗಡಿ ನಿಯಂತ್ರಣ ರೇಖೆಯಿಂದ(ಎಲ್ಒಸಿ) ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಅವರು ಹೇಳಿದ್ದಾರೆ.

ಆರೋಪಿ ಕುಪ್ವಾರಾ ಜಿಲ್ಲೆಯ ರಿಯಾಜ್ ಅಹ್ಮದ್ ರಾಥರ್ ಎಂದು ಗುರುತಿಸಲಾಗಿದ್ದು, ಆತನನ್ನು ಭಾನುವಾರ ದೆಹಲಿ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!