ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ, ಕೊಪ್ಪಳ:

ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆ ಮಾಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗಿಣಿಗೇರಾ ಏರ್‌ಸ್ಟ್ರೀಪ್ ಬಳಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ, ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!